ಕಾಣಿಯೂರು: ಹೈನುಗಾರರಿಗೆ ಬ್ಯಾಂಕಿಂಗ್ ಸೌಲಭ್ಯ ಕುರಿತು ಮಾಹಿತಿ ಕಾರ್ಯಕ್ರಮ

0

ಕಾಣಿಯೂರು: ಕೃಷಿಕರಿಗೆ, ಹೈನುಗಾರಿಕೆಗೆ ಉತ್ತೇಜನ ನೀಡಲು ಸಹಕಾರಿ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕುಗಳಿಂದ ವಿವಿಧ ರೀತಿಯ ಸಾಲ ಸೌಲಭ್ಯ ದೊರೆಯುತ್ತಿದ್ದು, ಅದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಬ್ಯಾಂಕಿಂಗ್ ಸಲಹೆಗಾರರಾದ ಉಷಾ ನಾಯಕ್ ರವರು ಹೇಳಿದರು. ಅವರು ಕಾಣಿಯೂರು ಹಾಲು ಉತ್ಪಾದಕರ ಸಂಘದ ವತಿಯಿಂದ ನಡೆದ ಆಸಕ್ತ ಹೈನುಗಾರರಿಗೆ ಬ್ಯಾಂಕಿಂಗ್ ಸೌಲಭ್ಯ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.

ಕೆಎಂಎಫ್ ನ ಉಪ ವ್ಯವಸ್ಥಾಪಕರಾದ ಡಾ.ಸತೀಶ್ ರಾವ್ ಮಾತನಾಡಿ, ಹೈನುಗಾರರಿಗೆ ಹಾಲು ಉತ್ಪಾದನೆಗೆ ಸರಕಾರದಿಂದ ಬೇರೆ ಬೇರೆ ರೀತಿಯ ಉತ್ತೇಜನ, ಸಬ್ಸಿಡಿ ಸಹಿತ ಮತ್ತು ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯಗಳು ಇವೆ ಎಂದು ತಿಳಿಸಿದರು. ಚಾರ್ವಾಕ ಪ್ರಾ.ಕೃ.ಪ.ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶೋಕ್ ರವರು ಸಹಕಾರಿ ಬ್ಯಾಂಕುಗಳಿಂದ ಸಿಗುವ ಸಾಲ ಸೌಲಭ್ಯದ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೆಎಂಎಫ್ ನ ವಿಸ್ತರಣಾಧಿಕಾರಿ ನಾಗೇಶ್, ಕಾಣಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ನಿರ್ದೇಶಕರಾದ ಮುರಳೀಧರ ಪುಣ್ಚತ್ತಾರು, ರಾಜೇಶ್ ಮೀಜೆ, ಭರತ್ ಅಗಳಿ, ಹೇಮಾವತಿ ಮುಗರಂಜ, ಕಾಣಿಯೂರು ಗ್ರಾ.ಪಂ.ಸದಸ್ಯ ಪ್ರವೀಣ್ಚಂದ್ರ ರೈ ಕುಮೇರು, ಸಂಘದ ಕಾರ್ಯದರ್ಶಿ ಜಗದೀಶ್ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here