ಕೇರಳ ಬಿಜೆಪಿ ಸಹ ಉಸ್ತುವಾರಿಯಾಗಿ ನಳಿನ್ ಕುಮಾರ್ ಕಟೀಲ್ ನೇಮಕ

0

ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕೇರಳ ರಾಜ್ಯ ಬಿಜೆಪಿಯ ಸಹ ಪ್ರಭಾರಿಯಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾಗಿರುವ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ರವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಹರವರು ಈ ನೇಮಕ ಮಾಡಿ ಆದೇಶಿಸಿದ್ದಾರೆ.

ದ.ಕ.ಲೋಕಸಭಾ ಕ್ಷೇತ್ರದಿಂದ ೩ ಬಾರಿ ಸಂಸದರಾಗಿ ಚುನಾಯಿತರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ೨೦೧೯ರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ಪಕ್ಷ ಸಂಘಟನೆ ಮಾಡಿದ್ದರು. ಈ ಹಿಂದೆ ವಿವಿಧ ರಾಜ್ಯದ ಚುನಾವಣಾ ಉಸ್ತುವಾರಿಯಾಗಿಯೂ ಇವರು ಕಾರ‍್ಯನಿರ್ವಹಿಸಿದ್ದರು. ಈ ಬಾರಿ ದ.ಕ. ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಬದಲು ಕ್ಯಾ| ಬ್ರಿಜೇಶ್ ಚೌಟರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿರುವ ಬಿಜೆಪಿ ಇದೀಗ ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ರಾಜ್ಯದ ಸಹ ಉಸ್ತುವಾರಿಯಾಗಿ ನೇಮಕ ಮಾಡುವ ಮೂಲಕ ಬಹುದೊಡ್ಡ ಜವಾಬ್ದಾರಿ ನೀಡಿದೆ.

LEAVE A REPLY

Please enter your comment!
Please enter your name here