ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ – ದೂರು ದಾಖಲು

0

ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಎಂಬಲ್ಲಿ ಮಾ.28ರಂದು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.
ವಾಹನ ಸವಾರರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು, ವಾಹನಗಳು ಜಖಂ ಆಗಿರುತ್ತದೆ. ಹಮೀದ್‌ ಎಂಬವರು ಚಲಾಯಿಸುತ್ತಿದ್ದ ಬೈಕ್‌ ಮತ್ತು ಸಾರ್ಥಕ್‌ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್‌ ನಡುವೆ ಡಿಕ್ಕಿ ಸಂಭವಿಸಿದೆ. ಅಜಾಗರೂಕತೆ ಹಾಗೂ ದುಡುಕುತನದಿಂದ ಬೈಕ್‌ ಚಲಾಯಿಸಿದ ಪರಿಣಾಮಗೆ ಡಿಕ್ಕಿ ಸಂಭವಿಸಿದೆ ಎಂದು ಸಾರ್ಥಕ್‌ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here