ವಿಟ್ಲ: ಹಳೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ, ಮಂಜೇಶ್ವರ ತಾಲೂಕಿನ ಬಾಯರುಪದವು ನಿವಾಸಿ ಇಬ್ರಾಹಿಂ ಮುಜಾಂಬಿಲ್ (28 ವ.) ಬಂಧಿತ ಆರೋಪಿ. ಹಳೇ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ವೇಳೆ ಇಬ್ರಾಹಿಂ ಮುಜಾಂಬಿಲ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಆತನ ಪತ್ತೆಗಾಗಿ ನ್ಯಾಯಾಲಯವು ವಾರಂಟ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ವಿಟ್ಲ ಠಾಣಾ ಎಸ್.ಐ. ವಿದ್ಯಾ, ಎ.ಎಸ್.ಐ. ಜಯರಾಮ, ಸಿಬ್ಬಂದಿಗಳಾದ ಆಶೋಕ ಪುತ್ತೂತು ಠಾಣಾ ಸಿಬ್ಬಂದಿ ರಾಧಾಕೃಷ್ಣ ರವರುಗಳ ತಂಡ ಆರೋಪಿಯನ್ನು ಪುತ್ತೂರಿನ ಮಾರ್ಕೆಟ್ ರಸ್ತೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಆಂದ್ರಪ್ರದೇಶದ ವಿಶಾಖಪಟ್ಟಣ ಠಾಣೆಯಲ್ಲಿ ಒಂದು ಪ್ರಕರಣಗಳು ದಾಖಲಾಗಿದೆ.