ಲೋಕಸಭಾ ಚುನಾವಣೆ : ಬಿಜೆಪಿಯಿಂದ ಚುನಾವಣಾ ನಿರ್ವಹಣಾ ಸಮಿತಿ ಸಭೆ

0

ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾರವರ ಅಧ್ಯಕ್ಷತೆಯಲ್ಲಿ ಮಾ.29ರಂದು ಬಿಜೆಪಿ ಕಛೇರಿಯಲ್ಲಿ ನಡೆಯಿತು.


ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ ಕೆಲಸಗಳ ಪ್ರಗತಿಯ ವಿವರಣೆಯನ್ನು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿಯವರು ಅವಲೋಕಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಚುನಾವಣೆಯ ಪ್ರಭಾರಿ ಸುಲೋಚನ ಜಿ.ಕೆ ಭಟ್, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪಕ್ಷದ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನೀಲ್ ಆಳ್ವಾ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಚುನಾವಣಾ ನಿರ್ವಹಣಾ ಸಹ ಸಂಚಾಲಕ ಉಮೇಶ್ ಕೋಡಿಬೈಲು, ಪ್ರಸನ್ನ ಮಾರ್ತ, ಪ್ರ.ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ,ನಿತೀಶ್ ಕುಮಾರ್ ಶಾಂತಿವನ, ಜೀವಂಧರ್ ಜೈನ್, ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಸಹಜ್ ರೈ ಬಳಜ್ಜ, ರಾಜೇಶ್ ಬನ್ನೂರು, ಲೋಕೇಶ್ ಹೆಗ್ಡೆ, ಅನಿಲ್ ತೆಂಕಿಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here