ಲೋಕಸಭಾ ಚುನಾವಣೆ: ಪುತ್ತೂರು ವಿಧಾನಸಭಾ ಕ್ಷೇತ್ರ ಉಸ್ತುವಾರಿಯಾಗಿ ಕಾವು ಹೇಮನಾಥ ಶೆಟ್ಟಿ ನೇಮಕ

0

ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕೆಪಿಸಿಸಿ ಸಂಯೋಜಕರಾಗಿರುವ ಕಾವು ಹೇಮನಾಥ ಶೆಟ್ಟಿಯವರನ್ನು ನೇಮಕ ಮಾಡಲಾಗಿದೆ.
ಲೋಕಸಭಾ ಚುನಾವಣೆಯ ಜಿಲ್ಲಾ ಉಸ್ತುವಾರಿಯಾಗಿರುವ ಮಾಜಿ ಸಚಿವ ಬಿ ರಮಾನಾಥ ರೈಯವರು ಈ ನೇಮಕವನ್ನು ಮಾಡಿ ಆದೇಶಿಸಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿದಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಶೋಕ್ ರೈ ಪರ ಚುನಾವಣಾ ಪ್ರಚಾರದಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಪುತ್ತೂರಿನಲ್ಲಿ ಪಕ್ಷವನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದರು. ಕಾಂಗ್ರೆಸ್ ಉಸ್ತುವಾರಿಗಳಾದ ಎಂ ಎಲ್ ಸಿ ಮಂಜುನಾಥ ಭಂಡಾರಿ ಹಾಗೂ ಪುತ್ತೂರು ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ಕಾವು ಹೇಮನಾಥ ಶೆಟ್ಟಿಯವರನ್ನು ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here