ಪುತ್ತೂರು: ಅಂತರ್ಜಲ ಇವತ್ತು ಭರಿದಾಗುತ್ತಿದೆ. ಇದು ಬಹಳ ಅಪಾಯಕಾರಿ ಹಾಗಾಗಿ ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಪುತ್ತೂರು ಪ್ರಧಾನ ವ್ಯವಹಾರಿಕ ನ್ಯಾಯಾಧೀಶೆ ಮತ್ತು ಜಿಎಂಎಫ್‌ಸಿ ಪುತ್ತೂರು ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುವ ಅರ್ಚನಾ ಕೆ. ಉಣ್ಣಿತಾನ್ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗು ವಕೀಲರ ಸಂಘ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ವರ್ತಕರ ಸಹಕಾರಿ ಸಂಘ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಸಿಟಿ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂಋಉ ಹಾಗು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ತರಬೇತುದಾರರ ಸಂಚಲನ ಮಂಗಳೂರು ಇವರುಗಳ ಸಹಯೋಗದೊಂದಿಗೆ ಪುತ್ತೂರು ಮನೀಶಾ ಸಭಾಂಗಣದಲ್ಲಿ ಮಾ.30ರಂದು ನಡೆದ ‘ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಮತ್ತು ವಿಶ್ವಜಲ ದಿನ’ ಕಾರ್ಯಕ್ರಮದ ಅಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿ ಮಾತನಾಡಿದರು. ವರ್ಷದಿಂದ ವರ್ಷಕ್ಕೆ ಅಂತರ್ಜಲ ಕಡಿಮೆ ಆಗುತ್ತಿದೆ. ತಾಪಮಾನ ಏರುತ್ತಿದೆ. ಅಂತರ್ಜಲವನ್ನು ಉಳಿಸುವ ಕುರಿತು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡುವ ಕೆಲಸ ಮಾಡಬೇಕಾಗಿದೆ ಎಂದರು.
ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶ ಮತ್ತು ಜೆಎಂಎಫ್‌ಸಿ ಪುತ್ತೂರು ಶಿವಣ್ಣ ಎಚ್ ಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ರೋಟರಿ ಕ್ಲಬ್ ಪುತ್ತೂರು ಸಿಟಿ ಮಾಜಿ ಅಧ್ಯಕ್ಷ ಜಾನ್ ಕುಟಿನ್ಹಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ವಕೀಲರಾದ ಕೃಷ್ಣಪ್ರಸಾದ್ ನಡ್ಸಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾನೂನು ಸೇವೆಗಳ ಸಮಿತಿಯ ಪ್ಯಾರಾ ಲೀಗಲ್ ವಾಲಂಟಿಯರ್ ವತ್ಸಲಾ ನಾಯಕ್ ಕಾರ್ಯಕ್ರಮದ ಸಂಯೋಜಕರಾಗಿದ್ದರು.
ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಸ್ವಾಗತಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಪಿ ಉಲ್ಲಾಸ್ ಪೈ ನೆಲ್ಲಿಕಟ್ಟೆ, ವಂದಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.