38ನೇ ವರ್ಷದ ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳಕ್ಕೆ ಚಾಲನೆ

0

ಉಪ್ಪಿನಂಗಡಿ: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವರ ಅನುಗ್ರಹ ಅಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ| ವೀರೇಂದ್ರ ಹೆಗ್ಗಡೆಯವರು (ಧರ್ಮಾಧಿಕಾರಿಗಳು. ಶ್ರೀ ಕ್ಷೇತ್ರ ಧರ್ಮಸ್ಥಳ) ಇವರ ಶುಭಾಶೀರ್ವಾದಗಳೊಂದಿಗೆ 38ನೇ ವರ್ಷದ ವಿಜಯ- ವಿಕ್ರಮ ಜೋಡುಕರೆ ಕಂಬಳಕ್ಕೆ ಮಾ.30ರಂದು ಚಾಲನೆ ನೀಡಲಾಯಿತು.

ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ಕುಮಾರ್ ರೈ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.
ಬೆಳಗ್ಗೆ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವಠಾರದಿಂದ ಕೋಣಗಳ ಮೆರವಣಿಗೆ ನಡೆಯಿತು. ಈ ಬಾರಿ ಬೋಟಿಂಗ್ ರೈಡ್, ಮಕ್ಕಳ ಮನೋರಂಜನಾ ಆಟಗಳು, ಸ್ವಾದಿಷ್ಟ ಆಹಾರ ಮೇಳ, ಕೃಷಿ ಮೇಳ, ವ್ಯವಹಾರ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here