ಎ.1:ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ 7ನೇ ವಾರ್ಷಿಕ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 7ನೇ ವಾರ್ಷಿಕ ಸಮಾರಂಭವು ಎ.19 ರಂದು ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಜರಗಲಿದೆ.


ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಎ.1 ರಂದು ಬೆಳಿಗ್ಗೆ ಹತ್ತು ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮತ್ತು ಸಂಜೆ 4 ಗಂಟೆಗೆ ದರ್ಬೆ ಅಶ್ವಿನಿ ಹೊಟೇಲ್ ಸಭಾಂಗಣದಲ್ಲಿ ಜರಗಲಿದೆ. ಆ ಪ್ರಯುಕ್ತ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಎಲ್ಲಾ ಸದಸ್ಯರು ಹಾಜರಿರಬೇಕು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಅಧ್ಯಕ್ಷ ಕರುಣಾಕರ್ ರೈ ದೇರ್ಲ, ಕಾರ್ಯದರ್ಶಿ ಚಂದ್ರಹಾಸ ರೈ ಬಿ, ನಿಕಟಪೂರ್ವ ಅಧ್ಯಕ್ಷ ಜೈರಾಜ್ ಭಂಡಾರಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here