ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಲುವಾಗಿ ಏ.1ರಂದು ಗೊನೆ ಮುಹೂರ್ತ ನಡೆಯಿತು.ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್.ಭಟ್ ಅವರು ಗೊನೆ ಮುಹೂರ್ತ ನೆರವೇರಿಸಿದರು.
ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ದೇವಳದ ರಥ ಬೀದಿಯ ಮೂಲಕ ದೇವಳದ ಬಳಿಯ ತೋಟವೊಂದರಿಂದ ಗೊನೆಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಸಹಕರಿಸಿದರು. ಶಾಸಕ ಅಶೋಕ್ ರೈ, ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಸಹಿತ ಹಲವು ಮಾಜಿ ಸದಸ್ಯರು ಉಪಸ್ಥಿತರಿದ್ದರು.