ಪುತ್ತೂರು: ಪುತ್ತೂರು ನಗರದಾಧ್ಯಂತ ಸಾರ್ವಜನಿಕ ಸ್ಥಳಗಳಲ್ಲಿ , ಗೋಡೆಗಳ ಮೇಲೆ ಬಿತ್ತಿ ಪತ್ರ ಅಂಟಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಪುತ್ತೂರು ನಗರದ ಸೌಂದರ್ಯವನ್ನು ಕಾಪಾಡುವ ಕೆಲಸವನ್ನು ನಗರಸಭೆ ಕೈಗೊಳ್ಳಬೇಕು ಎಂದು ಶಾಸಕರಾದ ಅಶೋಕ್ ರೈ ನಗರಸಭಾ ಆಯುಕ್ತರಿಗೆ ಸೂಚನೆಯನ್ನು ನೀಡಿದ್ದಾರೆ.
ಪುತ್ತೂರು ನಗರದಾಧ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ರೈಲ್ವೇ ಅಂಡರ್ ಪಾಸ್ ಬಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಬಿತ್ತಿ ಪತ್ರವನ್ನು ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದಿರುವ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕರು ಆಯುಕ್ತರಿಗೆ ಸೂಚನೆಯನ್ನು ನೀಡಿ ಎ.1ರಿಂದ ಕಾರ್ಯಾಚರಣೆ ನಡೆಸಿ ಎಲ್ಲಾ ಬಿತ್ತಿ ಪತ್ರಗಳನ್ನು ತೆರವು ಮಾಡಿ ಅಂಥವರಿಗೆ ದಂಡ ವಿಧಿಸುವಂತೆ ಸೂಚಿಸಿದ್ದಾರೆ.
ಪುತ್ತೂರು ನಗರದ ಸೌಂದರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ನಗರಸಭಾ ಆಯುಕ್ತರಿಗೆ ಸೂಚನೆಯನ್ನುನೀಡಲಾಗಿದ್ದು ಎ.1ರಿಂದಲೇ ಕಾರ್ಯಾಚರಣೆ ಆರಂಭವಾಗಲಿದೆ. ನಗರದ ಸೌಂದರ್ಯ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು.
ಅಶೋಕ್ ರೈ ಶಾಸಕರು ಪುತ್ತೂರು