ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಆಭ್ಯರ್ಥಿ ಪದ್ಮರಾಜ್ ಆರ್.ರವರು ಪುತ್ತೂರು ಹೃದಯ ಭಾಗದಲ್ಲಿರುವ ಮಾಯಿದೆ ದೇವುಸ್ ಚರ್ಚ್ ಗೆ ಎ.1ರಂದು ಭೇಟಿ ನೀಡಿ ಪ್ರಾರ್ಥಸಿದರು.
ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ವಂ| ಲಾರೆನ್ಸ್ ಮಸ್ಕರೇನ್ಹಸ್ ರವರು ಆಭ್ಯರ್ಥಿ ಪದ್ಮರಾಜ್ ಆರ್.ರವರಿಗೆ ಆಶೀರ್ವಾದ ನೀಡಿ, ಶಾಸಕ ಅಶೋಕ್ ಕುಮಾರ್ ರೈಯವರೂ ಕೂಡ ಚುನಾವಣಾ ಸಂದರ್ಭದಲ್ಲಿ ಚರ್ಚಿಗೆ ಆಗಮಿಸಿದ್ದರು. ಆವಾಗಲೂ ನಾನು ಅವರಿಗೆ ಗೆಲ್ತೀರಿ ಅಂತ ಆಶೀರ್ವಾದ ನೀಡಿದ್ದೆ. ಲೋಕಸಭಾ ಚುನಾವಣೆಗೆ ನಮ್ಮ ಸಹಕಾರ ಖಂಡಿತಾ ಇದೆ. ನಿಮ್ಮ ಪ್ರಯತ್ನಕ್ಕೆ ದೇವರು ಫಲ ನೀಡಲಿ ಎಂದು ಹೇಳು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಆಭ್ಯರ್ಥಿ ಪದ್ಮರಾಜ್ ಆರ್.ರವರು, ಎಲ್ಲರೂ ಆ ದೇವರ ಮಕ್ಕಳು ಎಂದು ನಂಬಿದವನು ನಾನು. ಸಮಾಜದಲ್ಲಿನ ಎಲ್ಲರನ್ನು ಒಟ್ಟಾಗಿ ಸೇರಿಸಿಕೊಂಡು ಹೋಗುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುತ್ತೇನೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನೆರವಿನ ಹಸ್ತ ಚಾಚುವುದು ನನ್ನ ಆದ್ಯ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಚುನಾವಾ ಉಸ್ತುವಾರಿ ಸಮಿತಿಯ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಬಿ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಸಹಿತ ಹಲವರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.