ರಾಮಕುಂಜ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸಲುವಾಗಿ ದೇವರ ಮಹಾರಥೋತ್ಸವವು ಎ.1ರಂದು ರಾತ್ರಿ ನಡೆಯಿತು.
ಎ.1ರಂದು ಬೆಳಿಗ್ಗೆ ಬಲಿ ಹೊರಟು ಉತ್ಸವ ನಡೆಯಿತು. ರಾತ್ರಿ ಬಲಿ ಹೊರಟು ಉತ್ಸವ, ರಕ್ತೇಶ್ವರಿ ಮತ್ತು ಹುಲಿ ದೈವಗಳ ನುಡಿಕಟ್ಟುಗಳು ನಡೆದು ಮಹಾರಥೋತ್ಸವ ನಡೆಯಿತು. ಬಳಿಕ ಅಶ್ವತ್ಥ ಕಟ್ಟೆಪೂಜೆ ನಡೆಯಿತು. ಉತ್ಸವ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಆಡಳಿತಾಧಿಕಾರಿ ಸುಜಾತ, ಉತ್ಸವ ಸಮಿತಿ ಪದಾಧಿಕಾರಿಗಳು ಸೇರಿದಂತೆ ಊರ, ಪರವೂರಿನ ಸಾವಿರಾರು ಭಕ್ತದಿಗಳು ಉಪಸ್ಥಿತರಿದ್ದು ರಥೋತ್ಸವವನ್ನು ಕಣ್ತುಂಬಿಸಿಕೊಂಡರು. ಈ ವೇಳೆ ಸುಡುಮದ್ದು ಪ್ರದರ್ಶನವೂ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮ:
ಸಂಜೆ ದೇವಗಿರಿ ಬಾಲಗೋಕುಲದ(ಧಾರ್ಮಿಕ ಶಿಕ್ಷಣ) ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ರಥೋತ್ಸವದ ಬಳಿಕ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಸುಂಕದಕಟ್ಟೆ ಬಜಪೆ ಇವರಿಂದ ’ಮಾಯದ ದೃಷ್ಟಿ’ ಯಕ್ಷಗಾನ ಬಯಲಾಟ ನಡೆಯಿತು.