ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.7ರಿಂದ ಎ.11ವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಕಾರ್ಯವು ಎ.2ರಂದು ಬೈಲುಗುತ್ತುವಿನಲ್ಲಿ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ನೇತ್ರತ್ವದಲ್ಲಿ ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆಯೊಂದಿಗೆ ನೆರವೇರಿತು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಸ್.ಅರ್. ರಂಗಮೂರ್ತಿ, ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಪ್ರಧಾನ ಕಾರ್ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಕೋಶಾಧಿಕಾರಿ ಶಂಕರನಾರಾಯಣ ಭಟ್ ಮಲ್ಯ, ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಎ: 7ರಿಂದ ಎ:11ರವರೆಗೆ ಜಾತ್ರೋತ್ಸವ:
ಕ್ಷೇತ್ರದಲ್ಲಿ ಎ.7ರಿಂದ ಎ.11ವರೆಗೆ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತ್ರತ್ವದಲ್ಲಿ 5 ದಿವಸದ ಜಾತ್ರೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

LEAVE A REPLY

Please enter your comment!
Please enter your name here