ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವು ಏ.2ರಂದು(ಇಂದು)ತೆಂಕಿಲ ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯುತ್ತಿದೆ. ಕಾರ್ಯಕ್ರಮವನ್ನು ಮೈಸೂರು ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್,ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ,ಬಿಜೆಪಿ ಮಂಗಳೂರು ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಬಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್,ಹರಿಪ್ರಸಾದ್ ಯಾದವ್, ಪ್ರತಾಪ್ ಸಿಂಹ ನಾಯಕ್ ಅನೇಕ ಪ್ರಮುಖರು ಸೇರಿದಂತೆ ವಿಧಾನಸಭಾ ಕ್ಷೇತ್ರದ 221 ಬೂತ್ ನ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಕಾರ್ಯಕರ್ತರು, ಜನಪ್ರತಿನಿಧಿಗಳು ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.