ಪುತ್ತೂರು: ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವಕ್ಕೆ ಎ.2ರಂದು ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ಬೆಳಿಗ್ಗೆ ಶಾಂತಿಗೋಡು ಶ್ರೀವಿಷ್ಣುಮೂರ್ತಿ ಭಜನಾ ಮಂದಿರದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ದೇವಾಲಯದ ಆಡಳಿತ ಸಮಿತಿ ಮೊಕ್ತೇಸರರು ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಶಾಂತಿಗೋಡು ರವರು ಚಾಲನೆ ನೀಡಿದರು.
ಬಳಿಕ ಮೆರವಣಿಗೆ ಮೂಲಕ ಹೊರೆಕಾಣಿಕೆ ದೇವಾಲಯಕ್ಕೆ ಸಮರ್ಪಿಸಲಾಯಿತು. ದೇವಾಲಯದಲ್ಲಿ ಅರ್ಚಕ ರಾಮಕೃಷ್ಣ ಬಳ್ಳಕ್ಕುರಾಯರವರು ಹೊರೆಕಾಣಿಕೆಗೆ ಪೂಜೆ ಸಲ್ಲಿಸಿದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೊನ್ನಪ್ಪ ಗೌಡ ಕೈಂದಾಡಿ, ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕೈಂದಾಡಿ, ಕೋಶಾಧಿಕಾರಿ ಬಾಲಕೃಷ್ಣ ಗೌಡ ತೋಟ ಹಾಗೂ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ವೀರಮಂಗಲ ಪಿ.ಎಂ.ಶ್ರೀ ಸ.ಹಿ.ಪ್ರಾ ಶಾಲಾ ಬಾಲಕಲಾವಿದರಿಂದ ಯಕ್ಷಗಾನ ಬಯಲಾಟ ಸುದರ್ಶನ ವಿಜಯ ನಡೆಯಲಿದೆ.
ನಾಳೆ(ಏ.3) ದರ್ಶನ ಬಲಿ, ನೇಮೋತ್ಸವ:
ಎ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಪಂಚವಿಂಶತಿ, ಕಲಶಪೂಜೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆಯುವುದು, ರಾತ್ರಿ ಮಹಾಪೂಜೆ, ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ, ರಾತ್ರಿ ದೈವಗಳ ನೇಮೋತ್ಸವ, ರಕ್ತೇಶ್ವರಿ, ವ್ಯಾಘ್ರಚಾಮುಂಡಿ, ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಲಿದೆ.