ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕ ಸಮೀಪದ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡ್ಯನಡ್ಕ ನಿವಾಸಿ ಮಹಮ್ಮದ್ ಅಲಿ ಎ (36 ವ.)ರವರ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ನಾನು ತನ್ನ ಮನೆಯಲ್ಲಿದ್ದ ವೇಳೆ ಗಣೇಶ್ ಎಂಬಾತನು ಮನೆಯ ಬಳಿಗೆ ಬಂದು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದು, ಅವ್ಯಾಚವಾಗಿ ಬೈದು, ತಾನು ತಂದಿದ್ದ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಸ್ಥಳೀಯರು ಬರುವುದನ್ನು ಕಂಡು ಆರೋಪಿಯು ಜೀವ ಬೆದರಿಕೆ ಹಾಕಿ ಪರಾರಿಯಾಗಿರುತ್ತಾನೆ ಎಂದು ಮಹಮ್ಮದ್ ಆಲಿರವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಮಹಮ್ಮದ್ ಅಲಿರವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಹಮ್ಮದ್ ಆಲಿರವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.