ಏ.6: ಇರ್ದೆ ದೇವಾಲಯದಲ್ಲಿ 20 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ನಿಡ್ಪಳ್ಳಿ; ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶ್ರೀ ವಿಷ್ಣುಮೂರ್ತಿ ದೇವಾಲಯ ಶ್ರೀ ಗೋಪಾಲಕ್ಷೇತ್ರ ಇರ್ದೆ ಇದರ ಆಶ್ರಯದಲ್ಲಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ದೂಮಡ್ಕ, ಪೇರಲ್ತಡ್ಕ, ಗುಮ್ಮಟಗದ್ದೆ , ಅಜ್ಜಿಕಲ್ಲು, ಅಜಲಡ್ಕ, ರೆಂಜ, ಕಕ್ಕೂರು, ಚೂರಿಪದವು ಇವುಗಳ ಸಹಕಾರದೊಂದಿಗೆ ಶ್ರೀ ರಾಧಾಕೃಷ್ಣ ಭಟ್ ಕಕ್ಕೂರು ಇವರ ಪೌರೋಹಿತ್ಯದಲ್ಲಿ ನಡೆಯುವ 20 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಏ.6 ರಂದು ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜರಗಲಿದೆ.

ಬೆಳಿಗ್ಗೆ ಗಂಟೆ 9 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ ಮಧ್ಯಾಹ್ನ ಗಂಟೆ 12 ಕ್ಕೆ ಮಹಾಪೂಜೆ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here