ಗೋಳ್ತಮಜಲು: ಬಸ್ಸು – ಪಿಕಪ್ ವಾಹನದ ಮಧ್ಯೆ ಅಪಘಾತ – ಹಲವರಿಗೆ ಗಾಯ

0

ವಿಟ್ಲ: ಕಲ್ಲಡ್ಕ – ವಿಟ್ಲ ರಸ್ತೆಯ ಗೋಳ್ತಮಜಲು ಎಂಬಲ್ಲಿ ಖಾಸಗಿ ಬಸ್ಸು ಹಾಗೂ ಪಿಕಪ್ ವಾಹನದ ಮಧ್ಯೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಏ.4ರಂದು ಬೆಳಗ್ಗೆ ನಡೆದಿದೆ.

ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನ ಹಾಗೂ ವಿಟ್ಲದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ನಡುವೆ ಈ ಅಪಘಾತ ಸಂಭವಿಸಿದೆ. ಪಿಕಪ್ ವಾಹನದಲ್ಲಿ ಕಾಂಕ್ರೀಟ್ ಕೆಲಸ ನಿರ್ವಹಿಸುವ ಕಾರ್ಮಿಕರಿದ್ದು, ಬೆಳಗ್ಗಿನ ಸಮಯವಾಗಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರೆನ್ನಲಾಗಿದೆ.
ಘಟನೆಯಿಂದಾಗಿ ಎರಡೂ ವಾಹನಗಳಲ್ಲಿ ಇದ್ದ ಹಲವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here