ವಿಟ್ಲ ಪಡ್ನೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

0

ವಿಟ್ಲ: ಮಹಿಳೆಯೋರ್ವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ.

ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ(60 ವ.) ರವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಸುಶೀಲಾರವರ ಪತಿ ಮೂರು ತಿಂಗಳ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಬಳಿಕ ಜೀವನದಲ್ಲಿ ಜಿಗುಪ್ಪೆ ಹೊಂದಿದ್ದ ಅವರು ತನ್ನ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here