ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಆಸ್ತಿ ಮಾಲಿಕರು ಮತ್ತು ಅನುಭೋಗದಾರರು 2024-25ನೇ ಸಾಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಎಪ್ರಿಲ್ 2024ನೇ ತಿಂಗಳಲ್ಲಿ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ ಮತ್ತು ಜೂನ್ ತಿಂಗಳಲ್ಲಿ ಪಾವತಿಸಿದಲ್ಲಿ ನಿಗದಿತ ತೆರಿಗೆ ಮತ್ತು ಜುಲೈ ತಿಂಗಳ ನಂತರ ಪಾವತಿಸಿದ್ದಲ್ಲಿ ಪ್ರತಿ ತಿಂಗಳಿಗೆ ಶೇ.2ರಷ್ಟು ದಂಡನೆಯನ್ನು ವಿಧಿಸಲಾಗುವುದು. ಅಲ್ಲದೆ ಖಾತಾ ಪ್ರತಿಗಾಗಿ ಪೂರಕ ದಾಖಲೆಗಳನ್ನು ನಗರಸಭೆಗೆ ಸಲ್ಲಿಸಿ ಇ-ಆಸ್ತಿ ತಂತ್ರಾಂಶದ ಮೂಲಕ ನಮೂನೆ -3ನ್ನು ಪಡೆದುಕೊಳ್ಳಬೇಕು. ನಿಗದಿತ ಅವಧಿಯಲ್ಲಿ ನಗರಸಭೆಗೆ ಸಂದಾಯವಾಗಬೇಕಾದ ತೆರಿಗೆಯನ್ನು ಪಾವತಿಸಿ ನಗರಸಭಾ ವ್ಯಾಪ್ತಿಯ ಅಭಿವೃದ್ಧಿಗೆ ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರು ಮನವಿ ಮಾಡಿದ್ದಾರೆ.