ಪುತ್ತೂರು: ಪಿಯುಸಿ ಪರೀಕ್ಷೆ ಬರೆದು ಮುಂದಿನ ಶಿಕ್ಷಣದ ಬಗ್ಗೆ ಚಿಂತೆಯೇ?, ಅತ್ತ್ಯುತ್ತಮ ಕೋರ್ಸ್ ನ ಆಯ್ಕೆಯಲ್ಲಿ ಗೊಂದಲವೇ?, ಈ ನಿಟ್ಟಿನಲ್ಲಿ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ ಒದಗಿಸುತ್ತಿದೆ.
ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಹಾಗೂ ಕಾಲೇಜಿನ ಐ.ಕ್ಯೂ.ಎ.ಸಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ‘ವೃತ್ತಿಪರ ಕೋರ್ಸ್’ ಗಳ ಬಗ್ಗೆ ಮಾಹಿತಿ, ಮುಂದಿನ ವಿದ್ಯಾಭ್ಯಾಸಕ್ಕೆ ಬ್ಯಾಂಕಿನಿಂದ ದೊರೆಯುವ ‘ಶೈಕ್ಷಣಿಕ ಸಾಲ ಸೌಲಭ್ಯ’ಗಳ ಹಾಗೂ ಸರ್ಕಾರ ಮತ್ತು ಖಾಸಗಿ ಕಂಪೆನಿಗಳಿಂದ ದೊರೆಯುವ ‘ವಿದ್ಯಾರ್ಥಿ ವೇತನ’ದ ಬಗ್ಗೆ ವೃತ್ತಿ ಜೀವನದ ಯಶಸ್ಸಿನಲ್ಲಿ ವಿದ್ಯಾರ್ಥಿಗಳ ಜೊತೆಗೆ ಎಂಬ ಧ್ಯೇಯವಾಕ್ಯದಡಿ ಮಾಹಿತಿ ಕಾರ್ಯಾಗಾರ ‘ದಿಕ್ಸೂಚಿ-2024’ ಕಾರ್ಯಕ್ರಮವು ಏ.6ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಪದವಿ ವಿದ್ಯಾಭ್ಯಾಸಕ್ಕೆ ದೊರಕುವ ಶೈಕ್ಷಣಿಕ ಸಾಲ ಸೌಲಭ್ಯಗಳ ಕುರಿತು ಪುತ್ತೂರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಶಾಖೆಯ ಹಿರಿಯ ವ್ಯವಸ್ಥಾಪಕ ಸುರೇಶ್ ನಾಯ್ಕ ಬಿ, ಪಿಯುಸಿ ನಂತರದ ವೃತ್ತಿಪರ ಕೋರ್ಸುಗಳ ಬಗ್ಗೆ ಕಿಶನ್ ಎನ್.ರಾವ್, ರಶ್ಮಿ ಕೆ, ಕು.ಭವ್ಯಶ್ರಿರವರು, ಪದವಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಗಳ ಬಗ್ಗೆ ಬೆಳ್ತಂಗಡಿಯ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ನಾಯಕ್ ರವರು ಉಪನ್ಯಾಸ ನೀಡಲಿದ್ದಾರೆ.
ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ 9141160704, 8088381678, 8050108510 ನಂಬರಿಗೆ ಸಂಪರ್ಕಿಸಬಹುದು ಎಂದು ಕಾಲೇಜಿನ ಚೇರ್ ಮ್ಯಾನ್ ಜಯಂತ್ ನಡುಬೈಲು, ಪ್ರಾಂಶುಪಾಲ ಸಂಪತ್ ಪಿ.ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.