ಪುತ್ತೂರು:ಭಾರತೀಯ ಜನತಾ ಪಾರ್ಟಿಯ ಪುತ್ತೂರು ಗ್ರಾಮಾಂತರ ಮಂಡಲ ಅಲ್ಪ ಸಂಖ್ಯಾತ ಮೋರ್ಚಾದ ಸಭೆಯು ಏ.೫ರಂದು ಪಕ್ಷದ ಕಚೇರಿಯಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಬಾರಿಯ ಲೋಕಸಭಾ ಚುನಾವಣೆ ಕಾರ್ಯಗಳಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.ಪ್ರಾಮಾಣಿಕವಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಅಲ್ಪಸಂಖ್ಯಾತ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರ ಮತವನ್ನು ಪಡೆದು ಅಭ್ಯರ್ಥಿ ಕ್ಯಾ|ಬ್ರಿಜೇಶ್ ಚೌಟರನ್ನು ಲಕ್ಷಾಂತರ ಮತಗಳ ಅಂತರದಲ್ಲಿ ಗೆಲ್ಲಿಸಲು ಕೆಲಸ ಮಾಡಲು ಕರೆ ನೀಡಲಾಯಿತು.
ಮಾಜಿ ಶಾಸಕ ಸಂಜೀವ ಮಠಂದೂರು,ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ಸಹ ಸಂಚಾಲಕ ಉಮೇಶ್ ಕೋಡಿಬೈಲು, ಮುಖಂಡ ಅರುಣ್ ಕುಮಾರ್ ಪುತ್ತಿಲ, ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಕೆಎಂಡಿಸಿ ಮಾಜಿ ಅಧ್ಯಕ್ಷ ಅಬೂಬಕ್ಕರ್ ಎನ್.ಬಿ., ಮಂಡಲ ಅಲ್ಪಸಂಖ್ಯಾತ ಮೋರ್ಚಾದ ಸಂಚಾಲಕ ರಫೀಕ್ ದರ್ಬೆ, ಪ್ರಮುಖ ಕಾರ್ಯಕರ್ತರಾದ ಉಮ್ಮರಬ್ಬಾ ಕೆದಿಲ, ರಝಾಕ್ ಕೆಜಿಎನ್, ಉಸ್ಮಾನ್, ಸೌಕತ್ ಆಲಿ, ಅನ್ಸಾರ್, ಖಾದರ್ ಕರ್ನೂರ್ ಹಾಗೂ ಅಬ್ದುಲ್ ರಝಾಕ್ ಸೇರಿದಂತೆ ಹಲವು ಮಂದಿ ಸಭೆಯಲ್ಲಿ ಭಾಗವಹಿಸಿದ್ದರು.