ಪುತ್ತೂರು: ಏ.26ರಂದು ನಡೆಯಲಿರುವ ದ.ಕ.ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ನಡೆದಿದ್ದು 10 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿರುವ 19 ನಾಮಪತ್ರಗಳು ಕ್ರಮಬದ್ಧವಾಗಿವೆ.
ಒಟ್ಟು 11 ಮಂದಿ ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿದ್ದವು.ಈ ಪೈಕಿ ಬಿಜೆಪಿ ಅಭ್ಯರ್ಥಿ ಕ್ಯಾ|ಬ್ರಿಜೇಶ್ ಚೌಟ,ಕಾಂಗ್ರೆಸ್ ಅಭ್ಯರ್ಥಿ ಆರ್.ಪದ್ಮರಾಜ್,ಜನತಾ ಪಕ್ಷ ಮತ್ತು ಜನತಾ ದಳ(ಯು)ಎರಡು ಪಕ್ಷಗಳಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸುಪ್ರೀತ್ ಕುಮಾರ್ ಪೂಜಾರಿ, ಬಹುಜನ್ ಸಮಾಜ್ ಪಾರ್ಟಿ(ಬಿಎಸ್ಪಿ)ಯ ಕಾಂತಪ್ಪ ಆಲಂಗಾರ್, ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ಕೆ.ಇ.ಮನೋಹರ,ಕರ್ನಾಟಕ ರಾಷ್ಟ್ರ ಸಮಿತಿಯ ರಂಜಿನಿ ಎಂ, ಕರುನಾಡ ಸೇವಕರ ಪಾರ್ಟಿ ಅಭ್ಯರ್ಥಿ ದುರ್ಗಾಪ್ರಸಾದ್(33ವ.),ಪಕ್ಷೇತರ ಅಭ್ಯರ್ಥಿಗಳಾಗಿರುವ ಸತೀಶ್ ಬಿ,ಮ್ಯಾಕ್ಸಿಂ ಪಿಂಟೋ,ದೀಪಕ್ ರಾಜೇಶ್ ಕುವೆಲ್ಲೋ ಇವರುಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.ಪಕ್ಷೇತರ ಅಭ್ಯರ್ಥಿ ಫ್ರಾನ್ಸಿಸ್ ಲ್ಯಾನ್ಸಿ ಮಾಡ್ತಾ ಅವರ ನಾಮಪತ್ರ ಮತ್ತು ಪಕ್ಷೇತರ ಅಭ್ಯರ್ಥಿ ದೀಪಕ್‌ರಾಜೇಶ್ ಕುವೆಲ್ಲೋ ಅವರ ಒಂದು ನಾಮಪತ್ರ ತಿರಸ್ಕೃತಗೊಂಡಿದೆ.