ಪಲ್ಲತ್ತಡ್ಕ ‌ಹೊಸಮ್ಮ ‌ದೈವಸ್ಥಾನದಲ್ಲಿ ನೇಮೋತ್ಸವದ ಪ್ರಯುಕ್ತ ತುಲಾಭಾರ ಸೇವೆ

0

ಕೆಯ್ಯೂರು: ಮಾಡಾವು ಪಲ್ಲತಡ್ಕ ಶ್ರೀ ಹೊಸಮ್ಮದೈವಸ್ಥಾನ ಪಲ್ಲತ್ತಡ್ಕದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಳಶ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳ ತಂಬಿಲ, ಶ್ರೀ ವೆಂಕಟರಮಣ ದೇವರ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ವರ್ಷದಲ್ಲಿ ಎರಡು ದಿವಸ ನಡೆಯುವ ತುಲಾಭಾರ ಸೇವೆಯು ಅಕ್ಕಿ, ಬೆಲ್ಲ ,ಸಕ್ಕರೆಯಿಂದ ನಡೆಯಿತು. ನೂರಾರು ಭಕ್ತಾಧಿಗಳು ಪಾಲ್ಗೊಂಡು,ನಂತರ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅದ್ಯಕ್ಷ ಎಸ್.ಬಿ.ಜಯರಾಮರೈ ಬಳಜ್ಜ, ಕಾರ್ಯದರ್ಶಿ ಗೋಪಾಲಕೃಷ್ಣ ಮಾಡಾವು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಪಲ್ಲತ್ತಡ್ಕ ಕುಟುಂಬಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here