ಮನೆಯಿಂದಲೇ ಮತಚಲಾಯಿಸುವ ಹಿರಿಯ ನಾಗರಿಕರಿಗೆ, ವಿಶೇಷಚೇತನರಿಗೆ ಮತದಾನದ ಜಾಗೃತಿ

0

ಪುತ್ತೂರು: ಪುತ್ತೂರು ತಾಲೂಕು ಸ್ವೀಪ್ ಸಮಿತಿ, ಪುತ್ತೂರು ತಾಲೂಕು ಪಂಚಾಯತ್ ಹಾಗೂ ವಿಕಲಚೇತನರ ಸೇವಾ ಕೇಂದ್ರ ಕಚೇರಿ, ಪುತ್ತೂರು ತಾ.ಪಂ ಸಹಯೋಗದಲ್ಲಿ ವಿಕಲಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ, ವಿಕಲಚೇತನರಿಗೆ ಹಾಗೂ ಹಿರಿಯನಾಗರಿಕರಿಗೆ ಮತದಾನದ ಜಾಗೃತಿ ಕಾರ್ಯಕ್ರಮ ತಾಲೂಕು ಪಂಚಾಯತ್‌ನ ಸಾಮರ್ಥ್ಯ ಸೌಧದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹನುಮ ರೆಡ್ಡಿ ಹಾಗೂ ತಾಲೂಕು ಪಂಚಾಯತ್ ಯೋಜಾನಾಧಿಕಾರಿ ಸುಕನ್ಯರವರು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ “ಬನ್ನಿ ಮತದಾನ ಕೆಂದ್ರಕ್ಕೆ” ಕರಪತ್ರ ವಿತರಿಸಲಾಯಿತು. ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹನುಮ ರೆಡ್ಡಿ ಮಾತನಾಡಿ ಹಿರಿಯ ನಾಗರಿಕರಿಗೆ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನು ಈ ಬಾರಿ ಚುನಾವಣಾ ಆಯೋಗ ಹಮ್ಮಿಕೊಂಡಿದೆ. ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ವಿಶೇಷಚೇತನರ ಹಾಗೂ 85ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು ಮನೆಯಿಂದಲೇ ಮತ ಚಲಾಯಿಸುವ ಪ್ರಕ್ರಿಯೆ ನಡೆಯಲಿದೆ. ನಿಮ್ಮ ಕಾರ್ಯವ್ಯಾಪ್ತಿಯಲ್ಲಿನ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಹೇಳಿದರು.

ವಿಕಲಚೇತನರ ತಾಲೂಕು ನೋಡಲ್ ಅಧಿಕಾರಿ ವಾಣಿಶ್ರೀ, ಪುತ್ತೂರು ತಾಲೂಕು ಪಂಚಾಯತ್ ಸ್ವೀಪ್ ಸಮಿತಿ ಸಂಯೋಜಕ ಭರತ್ ರಾಜ್, ತಾಲೂಕು ಪಂಚಾಯತ್ ಪ್ರಥಮ ದರ್ಜೆ ಸಹಾಯಕ ತುಳಸಿ, ಪುತ್ತೂರು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್ ಹಾಗೂ ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here