ಸ್ತ್ರೀಶಕ್ತಿ, ಸ್ವಸಹಾಯ ಗುಂಪುಗಳ ಎಲ್ಲಾ ಸದಸ್ಯರು, ಬಾಲ ವಿಕಾಸ ಸಮಿತಿಯ ಸದಸ್ಯರು, ಮಹಿಳೆಯರು ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವ ಕೆಲಸವನ್ನು ಇಲಾಖಾ ಸಿಬ್ಬಂದಿಗಳು ಮಾಡಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಹೇಳಿದರು.
ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ದ.ಕ.ಜಿಲ್ಲಾ ಸ್ವೀಪ್ ಸಮಿತಿ, ಪುತ್ತೂರು ತಾಲೂಕು ಸ್ವೀಪ್ ಸಮಿತಿ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂಭಾಗ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಬೂತ್ ಲೆವೆಲ್ ಆಫೀಸರ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದೀರಿ. ನಿಮ್ಮ ಬೂತ್ ಗಳಲ್ಲಿ ಶೇ.100 ಮತದಾನವಾಗಲು ಯೋಜನೆಗಳನ್ನು ರೂಪಿಸಿಕೊಂಡು ಮನೆ ಮನೆ ಭೇಟಿ ನೀಡಿ ಮತ ಚಲಾಯಿಸುವಂತೆ ತಿಳಿಸಬೇಕು ಎಂದು ಹೇಳಿದರು.
ಈ ಸಂದರ್ಭ ಮತದಾರರ ಪ್ರತಿಜ್ಞಾ ವಿಧಿಯನ್ನು ತಾ.ಪಂ.ಯೋಜನಾಧಿಕಾರಿ ಸುಕನ್ಯ ಬೋಧಿಸಿದರು.
ಈ ಸಂದರ್ಭ ಅಂಗನವಾಡಿ ಮೇಲ್ವಿಚಾರಕರಾದ ಆರತಿ, ನಾಗರತ್ನ, ವಾಣಿಶ್ರೀ, ಸುಜಾತ, ಅಂಗನವಾಡಿ ಮೇಲ್ವಿಚಾರಕರು ಉಪಸ್ಥಿತರಿದ್ದರು.