ಉಪ್ಪಿನಂಗಡಿ:34 ನೆಕ್ಕಿಲಾಡಿ ಗ್ರಾ.ಪಂ. ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಎ.10ರಿಂದ 24ರವರೆಗೆ 34 ನೆಕ್ಕಿಲಾಡಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.
ಶಿಬಿರದ ಉದ್ಘಾಟನೆ ಎ.10ರಂದು ಬೆಳಗ್ಗೆ 9:30ಕ್ಕೆ ನಡೆಯಲಿದ್ದು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಪ್ರಧಾನ ಅರ್ಚಕ ಕೆ. ಹರೀಶ್ ಉಪಾಧ್ಯಾಯ ಉದ್ಘಾಟನೆ ನೆರವೇರಿಸಲಿದ್ದಾರೆ. ಗ್ರಾ.ಪಂ.ನ ಪ್ರಭಾರ ಅಭಿವೃದ್ಧಿ ಅಧಿಕಾರಿ ಡಿ. ಸತೀಶ್ ಬಂಗೇರ ಅಧ್ಯಕ್ಷತೆ ವಹಿಸಲಿದ್ದು, ನೆಮ್ಮದಿ ವೆಲ್‌ನೆಸ್ ಸೆಂಟರ್‌ನ ಮಾಲಕ ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರೇಮಲತಾ ಕಾಂಚನಾ, ರಾಜೇಶ್ ನಾಯಕ್ ಭಾಗವಹಿಸಲಿದ್ದಾರೆ. ಪ್ರತಿದಿನ ಥೆರಪಿಯು ಪೂರ್ವಾಹ್ನ 9:30ರಿಂದ ಅಪರಾಹ್ನ 4:30ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.