ಉಪ್ಪಿನಂಗಡಿ: ಕೂಸಿನ ಮನೆ ಪುನರಾರಂಭಿಸಲು ಮನವಿ

0

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಆದರ್ಶನಗರದಲ್ಲಿ ಆರಂಭಿಸಲಾದ ಕೂಸಿನ ಮನೆ (ಶಿಶುಪಾಲನಾ ಕೇಂದ್ರ)ವನ್ನು ಮುಚ್ಚಲಾಗಿದ್ದು, ಅದನ್ನು ಪುನರಾರಂಭಿಸಬೇಕು. ಇಲ್ಲದಿದ್ದಲ್ಲಿ ಗ್ರಾ.ಪಂ. ಕಚೇರಿಯಲ್ಲಿ ಮಕ್ಕಳನ್ನು ತಂದು ಬಿಡಬೇಕಾಗುತ್ತದೆ ಎಂದು 34 ನೆಕ್ಕಿಲಾಡಿ ಗ್ರಾ.ಪಂ. ಸದಸ್ಯ ಪ್ರಶಾಂತ್ ಎನ್. ಅವರು 34 ನೆಕ್ಕಿಲಾಡಿ ಗ್ರಾ.ಪಂ.ಗೆ ನೀಡಿದ ಮನವಿಯಲ್ಲಿ ಎಚ್ಚರಿಸಿದ್ದಾರೆ.
ಆದರ್ಶನಗರ ಎಂಬಲ್ಲಿ ಕಳೆದ ಫೆ.5ರಂದು ಕೂಸಿನ ಮನೆಯನ್ನು ಪ್ರಾರಂಭ ಮಾಡಲಾಗಿತ್ತು. ಬಳಿಕ ಅದನ್ನು ಮಾ.31ರಂದು ಮುಚ್ಚಲಾಗಿದೆ. ಇದರಿಂದಾಗಿ ನಮ್ಮ ಮನೆಯ ಮಕ್ಕಳನ್ನು ಕರೆದುಕೊಂಡು ಕೆಲಸಕ್ಕೆ ಹೋಗಲು ತೊಂದರೆಯಾಗಿದೆ. ಆದ್ದರಿಂದ ಕೂಡಲೇ ಶಿಶುಪಾಲನಾ ಕೇಂದ್ರವನ್ನು ಪ್ರಾರಂಭ ಮಾಡಬೇಕು. ಇಲ್ಲದಿದ್ದಲ್ಲಿ ಗ್ರಾ.ಪಂ. ಕಚೇರಿಯಲ್ಲಿ ಮಕ್ಕಳನ್ನು ತಂದು ಬಿಡಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here