ಕಡಬ: ಕಡಬ ಸೈಂಟ್ ಜೋಕಿಮ್ಸ್ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.
ಸಮಾರಂಭದ ಅಧ್ಯಕ್ಷ ತೆಯನ್ನು ವಹಿಸಿದ್ದ ಸಂಸ್ಥೆಯ ಸಂಚಾಲಕ ವಂ.ಫಾ.ಪ್ರಕಾಶ್ ಪೌಲ್ ಡಿಸೋಜ ಮಾತನಾಡಿ, ಬೇಸಿಗೆ ಶಿಬಿರ ಎಂದರೆ ಮಕ್ಕಳು ತಮ್ಮ ತಮ್ಮ ಪ್ರತಿಭೆಗಳನ್ನು ಹೊರಹಾಕಲು ಇರುವ ಒಂದು ವೇದಿಕೆ. ಬೇಸಿಗೆ ಶಿಬಿರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲ, ಮನೋವಿಕಸನ ಕೂಡ ಆಗುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ ನಾಗರಾಜ್ ಎನ್.ಕೆ, ಕಲಕುಂಚಕ್ಕೆ ಬಣ್ಣ ಬಳಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಈಗಿನ ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ತಿಳುವಳಿಕೆಗಳನ್ನು ಹೊಂದಿರಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಆಸಕ್ತಿಯನ್ನು ಹೊಂದಿರಬೇಕು. ಅಂತೆಯೇ ಸರ್ಕಾರ ಕೂಡ ನಲಿ-ಕಲಿ ಅಂತಹ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಈ ಶಿಬಿರವು ಮಕ್ಕಳ ಮುಂದಿನ ಜೀವನಕ್ಕೆ ಸಹಕಾರಿಯಾಗಲಿ ಮತ್ತು ಶಿಬಿರದ ಕಲಿಕೆಗಳನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಿ ಎಂದು ಶುಭಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲ ವಂ.ಫಾ ಅಮಿತ್ ಪ್ರಕಾಶ್ ರೋಡ್ರಿಗಸ್ ವಿದ್ಯಾರ್ಥಿಗಳಿಗೆ ಶಿಬಿರದ ರೀತಿ ನಿಯಮಗಳನ್ನು ವಿವರಿಸಿದರು. ವೇದಿಕೆಯಲ್ಲಿ ಜೋಕಿಮ್ಸ್ ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಪೂರ್ಣಿಮಾ ಮತ್ತು ಸೈಂಟ್ ಆನ್ಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಶಾಂತಿ ಪ್ರಿಯಾ ಡಿಸೋಜ ಸ್ವಾಗತಿಸಿ ಭವಾನಿಯವರು ವಂದಿಸಿದರು. ಸಹ ಶಿಕ್ಷಕಿ ಲೋಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು.