ಶ್ರೀ ರಾಮಕುಂಜೇಶ್ವರ ಕ.ಮಾ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

0

ಪುತ್ತೂರು: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯ ಭಾಗ್ಯೆಶ್ ರೈ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪ್ರಸಿದ್ಧ ಕಬಡ್ಡಿ ತರಬೇತುದಾರರಾದ ಮಾಧವ ಬಿ. ಕೆ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸು ಸಾಧಿಸಲು ಕಿವಿಮಾತು ಹೇಳಿದರು. ವೇದಿಕೆಯಲ್ಲಿ ತರಬೇತುದಾರದ ಮಂಜುನಾಥ್, ಅಶ್ವಥ್, ಭರತ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಸತೀಶ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ವತಿಯಿಂದ ಉದ್ಘಾಟಕರನ್ನು ಸನ್ಮಾನಿಸಲಾಯಿತು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಪುಲ್ಲ ರೈ ವಂದಿಸಿದರು. ಶಾಲಾ ಗಣಿತ ಶಿಕ್ಷಕ ವೆಂಕಟೇಶ ದಾಮ್ಲೆ ಕಾಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here