ಪುತ್ತೂರು ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ

0

ಪರಸ್ಪರ ಗೌರವ ಕೊಡುವುದನ್ನು ಮೊದಲು ಕಲಿಯಬೇಕಾಗಿದೆ: ಹೀರಾ ಉದಯ್


ಪುತ್ತೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಮತ್ತು ವಕೀಲರ ಸಂಘ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಶಿಶು ಅಭಿವೃದ್ಧಿ ಇಲಾಖೆ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಹಾಗೂ ದ.ಕ ಜಿಲ್ಲಾ ಮಹಿಳಾ ತರಬೇತುದಾರರ ಸಂಚಲನ ಮಂಗಳೂರು ಇದರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆ ಮತ್ತು ಕಾನೂನು ಎಂಬ ವಿಷಯದ ಕುರಿತು ಕಾನೂನು ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ಪುತ್ತೂರು ಮನೀಷಾ ಸಭಾಂಗಣದಲ್ಲಿ ನಡೆಯಿತು.

ಪುತ್ತೂರು ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶೆ ಪ್ರಿಯಾ ಜೊಗಲೇಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾನೂನಿನ ದುರ್ಬಳಕೆ ಆಗದಂತೆ ತಡೆಯುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿ ಸಂದರ್ಭೋಚಿತವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ಯಾನಲ್ ವಕೀಲೆ ಹೀರಾ ಉದಯ್‌ರವರು ಮಾತನಾಡಿ, ಮಹಿಳೆ ತನ್ನ ಹಕ್ಕನ್ನು ಅರಿತಂತೆ ಇನ್ನೊಬ್ಬ ಮಹಿಳೆಗೆ ಗೌರವ ಕೊಡುವುದನ್ನು ಕೂಡ ಕಲಿತಾಗಲೇ ಆಕೆ ಪರಿಪೂರ್ಣ ಮಹಿಳೆ ಅನ್ನಿಸಿಕೊಳ್ಳಲು ಸಾಧ್ಯ. ಆಗಲೇ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು. ರೋಟರಿ ಕ್ಲಬ್ ಪುತ್ತೂರು ಯುವದ ವಚನ ಜಯರಾಮ್‌ರವರು ಮಹಿಳೆಯ ಮಾನಸಿಕ ಒತ್ತಡಗಳ ಬಗ್ಗೆ ಹಾಗೂ ಅದರ ಬಗ್ಗೆ ಮಹಿಳೆಯರು ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು. ವ್ಯವಹಾರಿಕಾ ನ್ಯಾಯಾಧೀಶೆ ಅರ್ಚನಾ ಕೆ.ಉಣ್ಣಿತಾನ್‌ರವರು ಕಾನೂನಿನಲ್ಲಿ ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡಿದರು. ಇಂದಿರಾ ರೈ ಕರ್ನೂರುರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕನ್ನಡ ಆಹಿತ್ಯ ಪರಿಷತ್‌ನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಸೇರಿದಂತೆ ಹಲವು ಮಂದಿ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವತ್ಸಲಾ ನಾಯಕ್ ಆಶಯ ಗೀತೆ ಹಾಡಿದರು. ಸಿಡಿಪಿಒ ಜಯಲಕ್ಷ್ಮಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here