34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಉದ್ಘಾಟನೆ

0

ಪುತ್ತೂರು : ಗ್ರಾಮ ಪಂಚಾಯತ್ 34 ನೆಕ್ಕಿಲಾಡಿ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಕಲ್ಲಾರೆ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಸುಮಾರು 15 ದಿನಗಳ ವರೆಗೆ ನಡೆಯಲಿರುವ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ ಇದರ ಉದ್ಘಾಟನಾ ಕಾರ್ಯಕ್ರಮ ಏ.10 ರಂದು 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಉದ್ಘಾಟನೆಯನ್ನು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಇದರ ಪ್ರಧಾನ ಅರ್ಚಕ ಕೆ. ಹರೀಶ್ ಉಪಾಧ್ಯಾಯ ದೀಪ ಪ್ರಜ್ವಲನೆ ಮೂಲಕ ನೆರವೇರಿಸಿದರು. 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ಇದರ ಪ್ರಭಾರ ಪಿ.ಡಿ.ಓ ಡಿ.ಸತೀಶ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು.

ಶಿಬಿರದ ಪೂರ್ಣ ಮಾಹಿತಿಯನ್ನು ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಕಲ್ಲಾರೆ ಇದರ ಮುಖ್ಯಸ್ಥರಾಗಿರುವ ಕೆ. ಪ್ರಭಾಕರ ಸಾಲ್ಯಾನ್ ನೀಡಿದರು. ಮುಖ್ಯ ಅತಿಥಿಗಳಾಗಿ ಪ್ರೇಮಲತಾ ಕಾಂಚನ ಹಾಗೂ ಕೆ. ರಾಜೇಶ್ ನಾಯಕ್ ಭಾಗವಹಿಸಿ, ಹಾರೈಸಿದರು. ಆ ಬಳಿಕ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಪ್ರಾರಂಭಗೊಂಡಿತು. ಸಾರ್ವಜನಿರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ, ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here