ನೆಲ್ಯಾಡಿ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಸಂತ ಜಾರ್ಜ್ ಪ.ಪೂ.ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ.
ಸಂಸ್ಥೆಯಲ್ಲಿ ಕಲಾ ಹಾಗೂ ವಾಣಿಜ್ಯ ವಿಭಾಗಗಳಿದ್ದು ಒಟ್ಟು 108 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 32 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 70 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ೬ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 62 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 22 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಕಲಾ ವಿಭಾಗ:
ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 46 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 10 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ನಾಲ್ವರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಸಂತಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಅವರು ತಿಳಿಸಿದ್ದಾರೆ.