ಪುತ್ತೂರು: ದ.ಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಕಾಂಗ್ರೆಸ್ ವ್ಯಾಪ್ತಿಯ ಲೋಕಸಭಾ ಚುನಾವಣೆಯ ಉಸ್ತುವಾರಿಯಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್ ಸಾಮೆತ್ತಡ್ಕ ಹಾಗೂ ಇಂಟಕ್ ಜಿಲ್ಲಾ ಮಾಜಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತಡ್ಕರವರನ್ನು ನೇಮಕಗೊಳಿಸಿ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ರವರು ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.
