ದ್ವಿತೀಯ ಪಿಯುಸಿ: ನೆಲ್ಯಾಡಿ ಜ್ಞಾನೋದಯ ಬೆಥನಿ ಪಿ.ಯು.ಕಾಲೇಜಿಗೆ ಶೇ.100 ಫಲಿತಾಂಶ

0

ನೆಲ್ಯಾಡಿ: 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಪಿ.ಯು. ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಸಂಸ್ಥೆಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿದ್ದು ಎರಡು ವಿಭಾಗಗಳಲ್ಲಿ ಒಟ್ಟು 73 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ. ಈ ಪೈಕಿ 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 48 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗ:
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 58 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 17 ವಿದ್ಯಾರ್ಥಿಗಳು ಡಿಸ್ಟಿಂಕ್ಷ್ನಲ್ಲಿ 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಮೂರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶಮಿತ್ ಬಿ.ಎ. 540, ಹಮ್ನಾ ಜೈನಾಬಾ 539, ಬೆರಿಲ್ ಟಿ.ಜೆ. 536, ಬಿನ್ಸಿ ಜೋಸೆಫ್ 536, ಭಾವನಾ ಬಿ 531, ಸಾನಿಯಾ ಬೆನೆಡಿಕ್ಟ್ ಪ್ರಕಾಶ್ 529, ಪ್ರಥ್ವಿನ್ ಕೆ.ಜೆ.527, ಕೌಶಲ್ ಬಿ 520, ಧನುಶ್ ಎಸ್ 519, ಚಂಪಶ್ರೀ 518, ಧ್ಯುತಿಶ್ರೀ 518, ಜಾಸ್ಮಿನ ಕೆ.ಜೆ.518, ಜೊಸ್ನಾ ಜಿಬಿ, ಫಾತಿಮಾ ಅಸಿಫಾ 517, ಕನ್ಯಾಶ್ರೀ 513, ಫಾತಿಮತ್ ಮುರ್ಷಿದಾ 512, ಖದೀಜಾ ಸಿಮಾ 511 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 15 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. ಮೂವರು ವಿಶಿಷ್ಠ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ವೈಭವ್ ಆರ್.ಕಾಮತ್ 534, ಅಹಲ್ಯ 521 ಹಾಗೂ ಜೀವಂತಿಕಾ 510 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here