ದ.ಕ ಲೋಕಸಭಾ ಕ್ಷೇತ್ರದ ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿಯಾಗಿ ಮಹಮ್ಮದ್ ಬಡಗನ್ನೂರು ನೇಮಕ

0

ಪುತ್ತೂರು: ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿ ಯಿಂದ ದ.ಕ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ರಮಾನಾಥ ರೈಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿಯನ್ನು ರಚಿಸಲಾಗಿದ್ದು, ಮಹಮ್ಮದ್ ಬಡಗನ್ನೂರುರವರನ್ನು ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಮಹಮ್ಮದ್ ಬಡಗನ್ನೂರುರವರು ಬಡಗನ್ನೂರು ಪಂಚಾಯತ್ ನ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಪಂಚಾಯತ್ ನ ಅಧ್ಯಕ್ಷರಾಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದು ಉತ್ತಮ ವಾಗ್ಮಿ ಯಾಗಿರುತ್ತಾರೆ. ಪ್ರಸ್ತುತ ಪಂಚಾಯತ್ ರಾಜ್ ಇಲಾಖೆಯ ರಾಜ್ಯ ತರಬೇತುದಾರರಾಗಿ, ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ, ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here