ಪುತ್ತೂರು: ಕಳೆದ ಆರು ವರ್ಷಗಳಿಂದ ರೆಂಜಲಾಡಿ ಬದ್ರಿಯಾ ಜುಮಾ ಮಸೀದಿಯಲ್ಲಿ ಖತೀಬರಾಗಿ ಸೇವೆ ಸಲ್ಲಿಸಿ ನಿರ್ಗಮಿಸುತ್ತಿರುವ ರಫೀಕ್ ಫೈಝಿ ಮಾಡನ್ನೂರು ಅವರನ್ನು ಈದುಲ್ ಫಿತರ್ ದಿನವಾದ ಎ.10ರಂದು ರೆಂಜಲಾಡಿ ಬದ್ರಿಯಾ ಜುಮಾ ಮಸೀದಿಯಲ್ಲಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.
ರೆಂಜಲಾಡಿ ಮಸೀದಿಯ ಅಧ್ಯಕ್ಷ ಆರ್.ಎಂ ಅಲಿ ಹಾಜಿ, ಪ್ರಧಾನ ಕಾರ್ಯದರ್ಶಿ ಝೈನುದ್ದೀನ್ ಹಾಜಿ ಜೆ.ಎಸ್, ಸದರ್ ಉಸ್ತಾದ್ ಅಬೂಬಕ್ಕರ್ ಮುಸ್ಲಿಯಾರ್, ಜಮಾಅತ್ ಪದಾಧಿಕಾರಿಗಳು, ಸದಸ್ಯರು, ಆದರ್ಶ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು, ಯಂಗ್‌ಮೆನ್ಸ್ ಪದಾಧಿಕಾರಿಗಳು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದವರು, ಮದ್ರಸ ವಿದ್ಯಾರ್ಥಿಗಳು ಹಾಗೂ ಜಮಾಅತರು ಉಪಸ್ಥಿತರಿದ್ದರು.