ಏ.16 ಕ್ಕೆ ಸಿ.ಎಂ,ಡಿಸಿಎಂ ಪುತ್ತೂರಿಗೆ- ಶಾಸಕರಿಂದ ಕಾರ್ಯಕ್ರಮದ ಪೂರ್ವಭಾವಿ ಸಭೆ

0

ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ಗೆ ಆಗಮನ
ಕಿಲ್ಲೆ ಮೈದಾನದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ

ಪುತ್ತೂರು:ಏ.26ರಂದು ನಡೆಯಲಿರುವ ದ.ಕ.ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.16ರಂದು ಪುತ್ತೂರಿಗೆ ಆಗಮಿಸಲಿದ್ದು ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.


ಸಿಎಂ.,ಡಿಸಿಎಂ ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ನಲ್ಲಿ ಬಂದಿಳಿಯಲಿದ್ದಾರೆ.ಆ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದು ಸಂಜೆ ೫ ಗಂಟೆಗೆ ನಿರ್ಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.ಜಿಲ್ಲಾ ಮಟ್ಟದ ಸಮಾವೇಶವನ್ನು ಪುತ್ತೂರಿನಲ್ಲಿ ಆಯೋಜನೆ ಮಾಡಲಾಗಿದೆ.ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.


ಮಹಾಲಿಂಗೇಶ್ವರ ದೇವಳಕ್ಕೂ ಭೇಟಿ:
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ ಎಂದು ಶಾಸಕರು ತಿಳಿಸಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ.,ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಡಿಸಿಸಿ ಕಾರ್ಯದರ್ಶಿ ಮುರಳೀಧರ್ ರೈ ಮಠಂತಬೆಟ್ಟು, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಪ್ರಮುಖರಾದ ಕುಂಬ್ರ ದುರ್ಗಾ ಪ್ರಸಾದ್ ರೈ, ಎ.ಕೆ.ಜಯರಾಮ ರೈ, ಉಸ್ತುವಾರಿ ನೂರುದ್ದೀನ್ ಸಾಲ್ಮರ, ಭೂ ನ್ಯಾಯ ಮಂಡಳಿ ಸದಸ್ಯ ಕೃಷ್ಣಪ್ರಸಾದ್ ಆಳ್ವ ಸೇರಿದಂತೆ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ರೋಡ್ ಶೋ..
ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ನಿಂದ ಕಿಲ್ಲೆ ಮೈದಾನದ ತನಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ರೋಡ್ ಶೋ ನಡೆಸುವ ಆಲೋಚನೆ ಇದ್ದು ಇದಕ್ಕಾಗಿ ಸಿದ್ದತೆಗಳು ನಡೆಯುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.

LEAVE A REPLY

Please enter your comment!
Please enter your name here