ನಾಣಿಲ ಸ. ಹಿ. ಪ್ರಾ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

0

ಕಾಣಿಯೂರು: ನಾಣಿಲ ಸ. ಹಿ. ಪ್ರಾ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿಯವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಶಾಲಾ ಮುಖ್ಯಗುರು ಪದ್ಮಯ ಗೌಡ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಕಳ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಪುರಂದರ ಅಂಬುಲ, ವಸಂತ ಮುಂಗಳಿಮನೆ, ಶಕುಂತಲಾ ಕುಂಬ್ಲಾಡಿ, ಬಾಲಕಿ ಕಳ, ಲತಾ ಕುಂಬ್ಲಾಡಿ, ವಸಂತಿ ಅಭಿಕಾರ ಶಿಕ್ಷಕಿಯಾದ ಸವಿತಾ ಹಾಗೂ ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಹ ಶಿಕ್ಷಕಿಯಾದ ನಂದಿನಿ ವಂದಿಸಿದರು.

LEAVE A REPLY

Please enter your comment!
Please enter your name here