ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

0

ಕಲಾವಿಭಾಗದಲ್ಲಿ ಸತತ ಎರಡನೇ ಬಾರಿ ರಾಜ್ಯ ಮಟ್ಟದಲ್ಲಿ ಮೂರನೇ ರ‍್ಯಾಂಕ್‌
ಗುಜರಾತ್ ಮೂಲದ ಪುರೋಹಿತ ಖುಷಿಬೆನ್‌ ರಾಜೇಂದ್ರಕುಮಾರ್‌ ರಾಜ್ಯಕ್ಕೆ 3ನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ
ರಾಜ್ಯಮಟ್ಟದಲ್ಲಿ ಹಲವಾರು ರ‍್ಯಾಂಕ್‌ ಗಳು ವಿವೇಕಾನಂದದ ಮುಡಿಗೆ
ದಾಖಲೆಯ 482 ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
331 ವಿದ್ಯಾರ್ಥಿಗಳಿಗೆ ಪ್ರಥಮ ಶ್ರೇಣಿ

ಪುತ್ತೂರು: 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಕೃಷ್ಣ ಮೋಹನ್ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಕಲಾ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪುರೋಹಿತ ಖುಷಿಬೆನ್‌ ರಾಜೇಂದ್ರಕುಮಾರ್, ರಾಜಮಟ್ಟದಲ್ಲಿ ಒಂಬತ್ತನೇ ಸ್ಥಾನ ಪಡೆದ ಅನಿಕಾರಶ್ಮಿಕೃಷ್ಣ ಹಾಗೂ ಹತ್ತನೇ ಸ್ಥಾನ ಪಡೆದ ವೈಷ್ಣವಿ, ವಿಜ್ಞಾನ ವಿಭಾಗದಲ್ಲಿ ಆರನೇ ಸ್ಥಾನ ಪಡೆದ ನೇತ್ರಾ ಡಿ, ಏಳನೇ ಸ್ಥಾನ ಪಡೆದ ಗಮನ ಗೌರಿಎಸ್. ಎಂ. ಎಂಟನೇ ಸ್ಥಾನ ಪಡೆದ ನಿಶ್ಚಯ ರೈ ಹಾಗೂ ತನುಷ್, ವಾಣಿಜ್ಯ ವಿಭಾಗದಲ್ಲಿ 588 ಅಂಕ ಪಡೆದರಿತೀಕ್ಷಾಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ವಿವೇಕಾನಂದ‌ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಕೃಷ್ಣಮೋಹನ್‌ ಅವರು “ಪ್ರತಿವರ್ಷದಂತೆ ಈ ವರ್ಷವೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ರಾಜ್ಯದ ಅತ್ಯುತ್ತಮ ಕಾಲೇಜುಗಳಲ್ಲಿ ಒಂದಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಹೊರಹೊಮ್ಮಿರುವುದು ಸಂತಸ ತಂದಿದೆ. ಈ ಸಾಧನೆಗೆ ಬೆನ್ನೆಲುಬಾಗಿ ನಿಂತ ವಿದ್ಯಾರ್ಥಿಗಳ ಪೋಷಕರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರಿಗೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಇವರು ಮಾತನಾಡಿ, “ದ್ವಿತೀಯ ಪಿಯುಸಿ ವ್ಯಾಸಂಗ ಎಂಬುದು ಸ್ಪರ್ಧೆಯ ಕುಲಮೆ. ಈ ಎರಡು ವರ್ಷಗಳ ಕಾಲ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಕಡೆಗೆ ತಮ್ಮ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಬೇಕು. ನಮ್ಮ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಶ್ರಮಿಸಿದ್ದಾರೆ ಹಾಗೂ ಉತ್ತಮ ಫಲಿತಾಂಶವನ್ನು ಗಳಿಸಿದ್ದಾರೆ. ಅವರಿಗೆ ಹಾರ್ದಿಕ ಅಭಿನಂದನೆಗಳು” ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ಮೀಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ರೈ ಎಂ., ಪೋಷಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಉಪನ್ಯಾಸಕನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಅಪ್ರತಿಮ ಸಾಧನೆ
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಒಟ್ಟು 839 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ದಾಖಲೆಯ 482 ವಿದ್ಯಾರ್ಥಿಗಳು ವಿಷ್ಟಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 331 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆಯುವ ಮೂಲಕ ಕಾಲೇಜು 98.33% ಫಲಿತಾಂಶ ದಾಖಲಿಸಿದೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ – ಉಪನ್ಯಾಸಕೇತರ ವೃಂದ, ಶಿಕ್ಷಕ ರಕ್ಷಕ ಸಂಘ ಹಾಗೂ ವಿವೇಕಾನಂದ ವಸತಿನಿಲಯದ ಸಿಬ್ಬಂದಿ ವರ್ಗ ಈ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here