ಬೆಳಂದೂರು ಕಾಲೇಜಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

0

ಕಾಣಿಯೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್ಎಸ್ಎಸ್, ರಾಜ್ಯಶಾಸ್ತ್ರ ವಿಭಾಗ ಹಾಗೂ ಇತಿಹಾಸ ವಿಭಾಗಗಳ ನೇತೃತ್ವದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ವಿಶೇಷ ಉಪನ್ಯಾಸ ನೀಡಿದ ಪುತ್ತೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕರು, ಪ್ರೊ.ಐವನ್ ಫ್ರಾನ್ಸಿಸ್ ಲೋಬೊ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ರವರ ಹೋರಾಟವನ್ನು ಸತ್ಯ ಮತ್ತು ವಿಧಾನದ ನಿದರ್ಶನವಾಗಿ ನಿರೂಪಿಸಿ ಸ್ವಾತಂತ್ರ್ಯಪೂರ್ವ ಕಾಲಗಟ್ಟದ ಪ್ರಭುತ್ವ ವ್ಯವಸ್ತೆ, ಸಮಾಜ ಹಾಗೂ ಪ್ರಸ್ತುತ ಕಾಲಮಾನದ ಪ್ರಭುತ್ವ ಮತ್ತು ಸಮಾಜ, ಯುವಜನತೆ ಮನಸ್ಥಿತಿಗಳ ಕುರಿತಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ ಪಿ ವಹಿಸಿದ್ದರು. ಐಕ್ಯುಎಸಿ ಸಂಚಾಲಕರಾದ ಸ್ವಾಮಿ.ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಾಂತಿ.ಕೆ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಹರಿಣಾಕ್ಷಿ ಉಪಸ್ಥಿತರಿದ್ದರು. ದ್ವಿತೀಯ ಬಿಎ ವಿದ್ಯಾರ್ಥಿ ಹೇಮಂತ್ ಕಾರ್ಯಕ್ರಮ ನಿರೂಪಿಸಿ, ಕಿರಣ್ ದ್ವಿತೀಯ ಬಿಕಾಂ ಸರ್ವರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕ ವರ್ಗದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here