ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷವು ವಿಶೇಷವಾದ ಮುತುವರ್ಜಿಯನ್ನು ವಹಿಸುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಯೋಜಕರಾಗಿ ಹಿರಿಯ ಕಾಂಗ್ರೆಸ್ ಧುರೀಣ ಅಗರಿ ನವೀನ್ ಭಂಡಾರಿಯರನ್ನು ನೇಮಕ ಮಾಡಲಾಗಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ, ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಂಯೋಜಕರಾಗಿ ಅಗರಿ ನವೀನ್ ಭಂಡಾರಿಯವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ರವರ ಶಿಫಾರಸು ಮೇರೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿಜಯ ಮುಳಗುಂದ್ರವರು ನೇಮಕ ಮಾಡಿದ್ದಾರೆ. ಮೂಲತ: ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಯಾಗಿರುವ ಅಗರಿ ನವೀನ್ ಭಂಡಾರಿಯವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ರಿಸರ್ವ್ ಬ್ಯಾಂಕ್ನ ಉತ್ತರ ವಲಯದ ನಿರ್ದೇಶಕರಾಗಿಯೂ ಕರ್ತವ್ಯ ನಿರ್ವಹಿಸಿರುವ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಮೂಲ್ಕಿ ಸುಂದರರಾಮ್ ಶೆಟ್ಟಿ ನಗರ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.