ಏ.19:ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ 7ನೇ ವಾರ್ಷಿಕ ಸಮಾರಂಭ-ತ್ರಿಜನ್ಮ ಮೋಕ್ಷ ಪ್ರಸಂಗ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 7ನೇ ವಾರ್ಷಿಕ ಸಮಾರಂಭವು ಎ.19 ರಂದು ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಜರಗಲಿದೆ.


ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಗೌರವಾಧ್ಯಕ್ಷ ಸವಣೂರು ಕೆ.ಸೀತಾರಾಮ ರೈರವರು ಅಧ್ಯಕ್ಷತೆ ವಹಿಸಲಿದ್ದಾರೆ. ಅಕ್ಷಯ ಕಾಲೇಜು ಚೇರ್ ಮ್ಯಾನ್ ಜಯಂತ್ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಗೌರವ ಅತಿಥಿಗಳಾಗಿ ರಾಜ್ಯ ಸರಕಾರದ ಧಾರ್ಮಿಕ ಪರಿಷತ್ ಸದಸ್ಯ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಮಲಾರಬೀಡು, ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿರವರು ಭಾಗವಹಿಸಲಿದ್ದಾರೆ.
ಬಳಿಕ ಪಟ್ಲ ಸತೀಶ್ ಶೆಟ್ಟಿರವರ ನೇತೃತ್ವದಲ್ಲಿ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಜನಪ್ರಿಯ ಪ್ರಸಂಗ “ತ್ರಿಜನ್ಮ ಮೋಕ್ಷ” ಪೌರಾಣಿಕ ಪುಣ್ಯ ಕಥಾನಕವನ್ನು ಆಡಿ ತೋರಿಸಲಿದ್ದಾರೆ. ರಂಗದಲ್ಲಿ ರಂಜಿಸಲಿರುವ ಕಲಾವಿದರಾದ ಭಾಗವತರಾಗಿ ಪಟ್ಲ ಸತೀಶ್ ಶೆಟ್ಟಿ, ಪ್ರಫುಲ್ಲಚಂದ್ರ ನೆಲ್ಯಾಡಿ, ಚೆಂಡೆಮದ್ದಳೆಯಲ್ಲಿ ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ಶೆಟ್ಟಿ ವಗೆನಾಡು, ಕೌಶಿಕ್ ರಾವ್ ಪುತ್ತಿಗೆ, ಸಂಗೀತ ಪೂರ್ಣೇಶ್ ಆಚಾರ್ಯ, ಸ್ತ್ರೀ ಪಾತ್ರದಲ್ಲಿ ಅಕ್ಷಯ್ ಮಾರ್ನಾಡ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು, ಹಾಸ್ಯ ಪಾತ್ರದಲ್ಲಿ ಮವ್ವಾರು ಬಾಲಕೃಷ್ಣ ಮಣಿಯಾಣಿ, ಸಂದೇಶ್ ಮಂದಾರ, ಪುರುಷ ಪಾತ್ರದಲ್ಲಿ ರಾಧಾಕೃಷ್ಣ ನಾವಡ ಮಧೂರು, ಮಾನ್ಯ ಸಂತೋಷ್, ಮೋಹನ್ ಬೆಳ್ಳಿಪ್ಪಾಡಿ, ಲೋಕೇಶ್ ಮುಚ್ಚೂರು, ಜಯಕೀರ್ತಿ ಜೈನ್ ಮಾಳ, ಭುವನ್ ಮೂಡುಜೆಪ್ಪು, ದಿವಾಣ ಶಿವಶಂಕರ ಭಟ್, ರಾಕೇಶ್ ರೈ ಅಡ್ಕ, ಮನೀಶ್ ಪಾಟಾಳಿ ಎಡನೀರು, ಹರಿರಾಜ್ ಶೆಟ್ಟಿಗಾರ್ ಕಿನ್ನಿಗೋಳಿ, ರೋಹಿತ್ ಮಳಲಿ, ಮನ್ವಿತ್ ನಿಡ್ಯೋಡಿ, ದಿನೇಶ್ ಶೆಟ್ಟಿ ಕಾವಳಕಟ್ಟೆ, ಡಿ.ಮಾಧವ ಬಂಗೇರ ಕೊಳ್ತಮಜಲು, ಸಚಿನ್ ಅಮೀನ್ ಉದ್ಯಾವರ, ರಮೇಶ್ ಪಟ್ರಮೆ, ಲಕ್ಷ್ಮಣ ಪೆರ್ಮುದೆ, ದಿವಾಕರ್ ಕಾಣಿಯೂರು, ಮಧುರಾಜ್ ಪೆರ್ಮುದೆರವರು ಅಭಿನಯಿಸಲಿದ್ದಾರೆ.


ಯಕ್ಷಧ್ರುವ ಪಟ್ಲ ಫೌಂಡೇಷನ್ ಪುತ್ತೂರು ಘಟಕದ ಅಧ್ಯಕ್ಷ ಎನ್.ಕರುಣಾಕರ್ ರೈರವರು ಸ್ವಾಗತಿಸಲಿದ್ದಾರೆ. ಯಕ್ಷಗಾನ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಅಧ್ಯಕ್ಷರು, ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here