ನೆಲ್ಯಾಡಿ: ನಿವೃತ್ತ ಮುಖ್ಯ ಶಿಕ್ಷಕಿ, ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬದಿಕಾನ ನಿಸರ್ಗನಿಲಯ ನಿವಾಸಿ ಕಮಲಾಕ್ಷಿ ಪಿ.(62ವ.)ಅವರು ಎ.16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
1 ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಕೆಲ ದಿನದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ನೆಲ್ಯಾಡಿ ಗ್ರಾಮದ ಪಟ್ಟೆಜಾಲು ದಿ.ಮುದರ ಮುಗೇರ ಹಾಗೂ ದಿ.ಗುಲಾಬಿ ದಂಪತಿ ಪುತ್ರಿಯಾದ ಕಮಲಾಕ್ಷಿ ಅವರು ಕೊಂಬಾರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ್ದರು. ಬಳಿಕ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕಿಯಾಗಿ, ಮುಖ್ಯಶಿಕ್ಷಕಿಯಾಗಿ, ಗೋಳಿತ್ತಟ್ಟು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಹಾಗೂ ಸುಳ್ಯ ತಾಲೂಕಿನ ಗುತ್ತಿಗಾರು ಸರಕಾರಿ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಪದವೀಧರೇತರ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ೩೧-೫-೨೦೨೧ರಂದು ನಿವೃತ್ತಿಯಾಗಿದ್ದರು. ಸುಮಾರು ೩೬ ವರ್ಷ ಸಹ ಶಿಕ್ಷಕಿಯಾಗಿ, ಮುಖ್ಯಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಇವರು ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದರು.
ಮೃತರು ಪತಿ ಕೃಷಿಕ ಸೋಮಯ್ಯ ಬದಿಕಾನ, ನೆಲ್ಯಾಡಿ ಪುಚ್ಚೇರಿ ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ಪದ್ಮನಾಭ ಪಿ., ಕೊಣಾಲು ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ಗಿರಿಜಾ ಪಿ., ನೆಲ್ಯಾಡಿ ಗ್ರಾ.ಪಂ.ಗುಮಾಸ್ತೆ ಲಲಿತಾ ಪಿ. ಸಹಿತ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬದಿಕಾನ ಮನೆಯಲ್ಲಿ ನಡೆಯಿತು. ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಸಹಶಿಕ್ಷಕರು, ಜನಪ್ರತಿನಿಧಿಗಳು ಸೇರಿದಂತೆ ನೂರಾರು ಮಂದಿ ಆಗಮಿಸಿ ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.