ದರ್ಬೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್ ಗಳಿಗೆ ಡಿಕ್ಕಿ ಹೊಡೆದ ಕಾರು

0

ಪುತ್ತೂರು: ಪುತ್ತೂರಿನಿಂದ ದರ್ಬೆ ಕಡೆಗೆ ಹೋಗುತ್ತಿದ್ದ ಅಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆಯಲ್ಲಿ ಸಂಭವಿಸಿದೆ.

ಕೆಮ್ಮಾಯಿಯ ವ್ಯಕ್ತಿಯೊಬ್ಬರು ಕಾರು ಚಲಾಯಿಸುತ್ತಿದ್ದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೂರು ಸ್ಕೂಟರ್ ಸೇರಿದಂತೆ ಸಾಮೆತ್ತಡ್ಕದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕರು ಭೇಟಿ ನೀಡಿದ್ದಾರೆ. ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲಾಗಿದ್ದು, ಕಾರು ಚಾಲಕ ಜಖಂಗೊಂಡ ಸ್ಕೂಟರ್‌ ಗಳ ರಿಪೇರಿ ವೆಚ್ಚ ಭರಿಸುವುದಾಗಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here