ತೆಂಕಿಲ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಾಗತ ಕಾರ್ಯಕ್ರಮ

0

ಪುತ್ತೂರು:ತೆಂಕಿಲ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏ.19ರಂದು ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಹಾಗೂ ಇಪ್ಪತ್ತರ ಸಂಭ್ರಮ, ಸರಣಿ ಉಪನ್ಯಾಸ ಮಾಲಿಕೆ ಉದ್ಘಾಟನೆ ನಡೆಯಿತು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ನಿರ್ದೇಶಕ ಬಲರಾಮ ಆಚಾರ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ತಂತ್ರಜ್ಞಾನ ಅಭಿವೃದ್ಧಿ ಹೊಂದಿದ ಹಾಗೇ ಶಿಕ್ಷಕರು ಹೊಸ ಹೊಸ ವಿಷಯವನ್ನು ಕಲಿಯುವ ಗುಣವನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಉಪನ್ಯಾಸ ಮಾಲಿಕೆಯ ಮೊದಲನೆಯ ಉಪನ್ಯಾಸವನ್ನು ನಡೆಸಿಕೊಟ್ಟ ಮಂಗಳೂರು ಶಕ್ತಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸುನಿಲ್ ಪಲ್ಲಮಜಲು ಮೌಲ್ಯಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಎಂಬ ವಿಷಯದ ಕುರಿತು ಮಾತನಾಡುತ್ತಾ, ಮೌಲ್ಯಗಳು ಶಿಕ್ಷಣದ ಮಹತ್ವವನ್ನು ಹೆಚ್ಚಿಸುತ್ತದೆ ಆದ ಕಾರಣ ಶಿಕ್ಷಕರು ವೃತ್ತಿಯ ಜೊತೆಗೆ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸಂಚಾಲಕಿ ಗಂಗಮ್ಮ. ಎಚ್. ಶಾಸ್ತ್ರಿ ಇವರು ಮಾತುಗಾರಿಕೆ ಶಿಕ್ಷಕರ ಬಹು ಅಮೂಲ್ಯವಾದ ಆಸ್ತಿ ಆದ ಕಾರಣ ಎಲ್ಲಾ ಮೂಲಗಳಿಂದಲೂ ವಿಷಯವನ್ನು ಸಂಗ್ರಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ರಮೇಶ್ ನಾಯಕ್, ಕೃಷ್ಣ ನಾಯ್ಕ್, ಭೋದಕ – ಭೋದಕೇತರ ಸಿಬ್ಬಂದಿಗಳು ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದರು.

ಕಾಲೇಜಿನ ಪ್ರಾಂಶುಪಾಲ ಶೋಭಿತಾ ಸತೀಶ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕ ಮುರಳೀಕೃಷ್ಣ ಕೆ. ವಂದಿಸಿದರು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಕೀರ್ತನ್ ಶೆಟ್ಟಿ ಹಾಗೂ ಯಾಕ್ಷಿತಾ ನಿರೂಪಿಸಿದರು. 

LEAVE A REPLY

Please enter your comment!
Please enter your name here