ಬಿಳಿನೆಲೆ: ರಕ್ಷಿತಾರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆ ಬುರುಡೆ, ಬ್ಯಾಗ್ ಪತ್ತೆ

0

ಕಡಬ: ಬಿಳಿನೆಲೆ ಗ್ರಾಮದ ಹಳೆನರ್ಸರಿ ಬಳಿ ರಾಜ್ಯ ಹೆದ್ದಾರಿ ಬದಿಯ ರಕ್ಷಿತಾರಣ್ಯದ ದಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ, ಬ್ಯಾಗ್ ಹಾಗೂ ಪಕ್ಕದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುತ್ತಿರುವುದು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಬಿಳಿನೆಲೆ ನಿವಾಸಿ ಚಂದ್ರಶೇಖರ್ ಎಂಬವರು ಎ.19ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ ಕಾಡಿನಿಂದ ಕಟ್ಟಿಗೆ ತರಲೆಂದು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗ್ ಕಂಡುಬಂದಿದ್ದು, ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ ಬಟ್ಟೆಯೊಂದು ಮರದ ಕೊಂಬೆಯಿಂದ ನೇತಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಅವರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಚಂದ್ರಶೇಖರ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್: 12/2024 ಕಲಂ:174 (3),(iv) CrPC ರಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here