ಪಕ್ಷದ ನಾಯಕನ ಮಗಳಿಗೇ ರಕ್ಷಣೆ ನೀಡಲಾಗದ ಕಾಂಗ್ರೆಸ್ ರಾಜ್ಯಕ್ಕೆ ರಕ್ಷಣೆ ನೀಡೀತೇ? – ಸಂಜೀವ ಮಠಂದೂರು ಪ್ರಶ್ನೆ

0

ಪುತ್ತೂರು: ಹುಬ್ಬಳ್ಳಿ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಅವರನ್ನು ಬರ್ಬರವಾಗಿ ಕೊಲೆ ಮಾಡುವ ಮೂಲಕ ಪ್ರೀತಿ ಪ್ರೇಮದ ಹೆಸರಿನಲ್ಲಿ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ. ತನ್ನದೇ ಪಕ್ಷದ ನಾಯಕನ ಮಗಳಿಗೇ ರಕ್ಷಣೆ ನೀಡಲಾಗದ ಕಾಂಗ್ರೆಸ್ ಸರಕಾರ ರಾಜ್ಯಕ್ಕೆ ರಕ್ಷಣೆ ನೀಡೀತೇ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.


ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಫಯಾಝ್ ಎಂಬ ವ್ಯಕ್ತಿ ಪ್ರೀತಿಯ ನಾಟಕ ಮಾಡಿ ನೇಹಾಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸಮಾಜದಲ್ಲಿ ಕಲುಷಿತ ವಾತಾವರಣ ನಿರ್ಮಿಸಲು ಮತಾಂಧ ವ್ಯಕ್ತಿ ಯತ್ನಿಸಿದ್ದಾನೆ. ವಿಧಾನಸೌಧದ ಬಳಿ ಪಾಕ್ ಪರ ಘೋಷಣೆ ಕೂಗಿದಾಗ ರಾಜ್ಯ ಸರಕಾರ ಮೃದು ಧೋರಣೆ ತಳೆದಿರುವುದೇ ಇಂಥ ಸಮಾಜ ದ್ರೋಹಿ ಚಟುವಟಿಕೆಗಳು ನಡೆಯಲು ಪ್ರೇರಣೆ. ಅಪರಾಧ ಮಾಡುವ ಜಿಹಾದಿ ಮಾನಸಿಕತೆಗಳಿಗೆ ಏನೂ ಮಾಡಿದರೂ ನಡೆಯುತ್ತದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಪುತ್ತೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಚುನಾವಣಾ ಕಾರ್ಯದ ನಿಮಿತ್ತ ಮನೆ ಭೇಟಿ ಮಾಡಿದಾಗ ಅವರ ಮೇಲೆ ಹಲ್ಲೆ ಮಾಡುವ ಯತ್ನ ನಡೆದಿದೆ. ಇದೆಲ್ಲ ಕಾನೂನು ಸುವ್ಯವಸ್ಥೆ ಕುಸಿದಿರವುದಕ್ಕೆ ಸಾಕ್ಷಿಯಾಗಿದೆ. ರಾಜ್ಯದ ಗೃಹ ಸಚಿವ ಪರಮೇಶ್ವರ್ ಅವರು ಅತ್ಯಂತ ದುರ್ಬಲ ಸಚಿವರಾಗಿದ್ದಾರೆ. ಹುಬ್ಬಳ್ಳಿ ಘಟನೆಯ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು ಎಂದು ಮಠಂದೂರು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಗ್ರಾಮಾಂತ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ, ಪುತ್ತೂರು ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿ ಸುಲೋಚನಾ ಭಟ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾಗೌರಿ, ಮುಖಂಡರಾದ ಅರುಣ್ ಪುತ್ತಿಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here