ಕಡಬ: ಲೋಕಸಭಾ ಚುನಾವಣೆ 2024 ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಮತಗಟ್ಟೆಯಲ್ಲಿ ಧ್ವಜಾರೋಹಣಾ, ನಮ್ಮ ನಡೆ ಮತಗಟ್ಟೆಯ ಕಡೆ ಮತ್ತು ಸ್ವಚ್ಛತಾ ಕಾರ್ಯಕ್ರಮವು ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಿತು.
ಮತಗಟ್ಟೆ ಸಂಖ್ಯೆ 48, 49ಕ್ಕೆ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾದ ಬಿ ವಿ ಜಯಣ್ಣ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕ್ ಪಂಚಾಯತ್ ವ್ಯವಸ್ಥಾಪಕರಾದ ಭುವನೇಂದ್ರ ಕುಮಾರ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆನಂದ ಎ, ಕಾರ್ಯದರ್ಶಿ ಗೋಪಿನಾಥ್ ಡಿ, ಶಾಲಾ ಮುಖ್ಯಗುರುಗಳು, ಸಿಬ್ಬಂದಿಗಳು, ಬಿ ಎಲ್ ಓ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಗ್ರಾಮಸ್ಥರು ಭಾಗವಹಿಸಿದರು.